ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ: ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ..!

ಹೈದರಾಬಾದ್: ಪಂಚರಾಜ್ಯಗಳ ಚುನಾವಣೆ ಈಗಾಗಲೇ ಮುಕ್ತಾಯವಾಗಿದ್ದು ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ಫಲಿತಾಂಶ ಹೊರ ಬಿದ್ದ ಬಳಿಕ ತೆಲಂಗಾಣದಲ್ಲಿ ಗೆಲ್ಲಲಿರುವ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ವಿವಿಧ ಮತಗಟ್ಟೆಗಳ ಸಮೀಕ್ಷೆ ತಿಳಿಸಿದ್ದು,  ಆಡಳಿತಾರೂಢ ಬಿಆರ್ಎಸ್ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಇದೆ. ಅಪರೇಷನ್ ಗೆ ಒಳಗಾಗುವ ಸಾಧ್ಯತೆ ಹಿನ್ನೆಲೆ  ತೆಲಂಗಾಣದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವತ್ತ ಕಾಂಗ್ರೆಸ್ ಹೈಕಮಾಂಡ್ ಚಿಂತಿಸುತ್ತಿದೆ  ಎನ್ನಲಾಗಿದೆ. ಈ ಉಸ್ತುವಾರಿಯನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ಗೆ 70ಕ್ಕಿಂತ ಕಡಿಮೆ ಸೀಟುಗಳು ಬಂದರೆ, ಶಾಸಕರನ್ನು ಬೆಂಗಳೂರು ಅಥವಾ ಬೇರೆಡೆಗೆ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಸ್ತಾಪವಿದೆ. ಬಹುಶಃ ಶಾಸಕರನ್ನು ಹೋಟೆಲ್ ಅಥವಾ ರೆಸಾರ್ಟ್ಗೆ ಸ್ಥಳಾಂತರ ಮಾಡಬಹುದು ಎಂದು ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

119 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ತೆಲಂಗಾಣದಲ್ಲಿ ಸರ್ಕಾರ ರಚನೆಗೆ 60 ಸ್ಥಾನಗಳು ಬೇಕಿದೆ. ಕೆಲವೇ ಅಂತರದಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಲಿದೆ ಎಂದು ಕೆಲವು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಇನ್ನೂ ಕೆಲವು ಸಮೀಕ್ಷೆಗಳು ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ ಎಂದಿವೆ. ಸಮೀಕ್ಷೆಯ ಬೆನ್ನಲ್ಲೇ ಮುಂದಿನ ತಯಾರಿಯಾಗಿ ತನ್ನ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಯಿರುವ ಕ್ಷೇತ್ರಗಳಿಗೆ ಕಾಂಗ್ರೆಸ್ ಇಬ್ಬರು ಸಂಯೋಜಕರನ್ನು ಕಳುಹಿಸಿದೆ ಎಂದು ವರದಿಯಾಗಿದೆ. ಫಲಿತಾಂಶದ ಬಳಿಕ ಚುನಾವಣಾ ಅಧಿಕಾರಿಗಳಿಂದ ಪ್ರಮಾಣಪತ್ರಗಳನ್ನು ಪಡೆದ ನಂತರ ಶಾಸಕರನ್ನು ಕಾರುಗಳ ಬೆಂಗಾವಲುಪಡೆಯಲ್ಲಿ ಬೆಂಗಳೂರಿಗೆ ಕರೆದು ತರುವ ಮೊದಲು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಬಹುದು ಎಂದು ಮೂಲಗಳು ತಿಳಿಸಿವೆ.

 

Related posts

ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್ ಕಿಡಿ.

ಸೆ.26ರಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ.

ವರ್ಗಾವಣೆ ದಂಧೆ ಆಡಿಯೋ ವೈರಲ್ ವಿಚಾರ:  ಸಮಗ್ರ ತನಿಖೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ