ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಅಮೆರಿಕದಲ್ಲಿ ಅತಿದೊಡ್ಡ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣ: ಅನಾವರಣಕ್ಕೆ ಸಜ್ಜು.

ವಾಷಿಂಗ್ಟನ್: ಅಮೆರಿಕದ ಮೇರಿಲ್ಯಾಂಡ್ನಲ್ಲಿ ಭಾರತದ ಸಂವಿಧಾನದ  ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ  ನಿರ್ಮಾಣ ಮಾಡಲಾಗಿದ್ದು, ಅಕ್ಟೋಬರ್ 14 ರಂದು ಅನಾವರಣಗೊಳ್ಳಲು ಸಜ್ಜುಗೊಳಿಸಲಾಗಿದೆ.

ಮೇರಿಲ್ಯಾಂಡ್ ನ ಅಕೋಕೀಕ್ನಲ್ಲಿ 13 ಎಕರೆ ಭೂಮಿಯಲ್ಲಿ ಸ್ಥಾಪಿಸಲಾದ ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದ (ಎಐಸಿ) ಭಾಗವಾಗಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ‘ಸಮಾನತೆಯ ಪ್ರತಿಮೆ’ ಎಂಬ ಹೆಸರಿನ 19 ಅಡಿ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಬೋಧನೆ ಮತ್ತು ಸಿದ್ಧಾಂತಗಳನ್ನು ಹರಡುವ ಉದ್ದೇಶದಿಂದ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ಎಐಸಿ ಹೇಳಿದೆ. ಇದಲ್ಲದೆ, ಸಮಾನತೆ ಮತ್ತು ಮಾನವ ಹಕ್ಕುಗಳ ಸಂಕೇತವಾಗಿದೆ. ಭಾರತದ ಹೊರಗೆ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ ಇದಾಗಿದ್ದು, ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ವಿಶೇಷತೆಯೆಂದರೆ, ಗುಜರಾತ್ನಲ್ಲಿ ಸರ್ದಾರ್ ಪಟೇಲ್ ಪ್ರತಿಮೆಯನ್ನು (ಏಕತಾ ಪ್ರತಿಮೆ) ವಿನ್ಯಾಸಗೊಳಿಸಿದ ಖ್ಯಾತ ಶಿಲ್ಪಿ ರಾಮ್ ಸುತಾರ್ ಅವರೇ ಈ ಪ್ರತಿಮೆಯನ್ನು ವಿನ್ಯಾಸಗೊಳಿಸಿದ್ದಾರೆ.

 

Related posts

ಶಿವಮೊಗ್ಗ ದಸರಾ: ಅ.15 ಹಾಗೂ ಅ.17ರಿಂದ 21ರ ವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ.

ಪತ್ರಕರ್ತರ ಸಂಘ, ಪ್ರೆಸ್‌ ಟ್ರಸ್ಟ್‌ ವತಿಯಿಂದ ಪ್ರತಿಭಾ ಪುಸ್ಕಾರ- ಅ. 26 ರ ಒಳಗೆ ಅರ್ಜಿ ಸಲ್ಲಿಸಲು ಸೂಚನೆ.

ರಾಜ್ಯದಲ್ಲಿ ರಸ್ತೆ ಅಪಘಾತ ಪ್ರಮಾಣ ಹೆಚ್ಚಳ..