ಕನ್ನಡಿಗರ ಪ್ರಜಾನುಡಿ
ಜಿಲ್ಲೆಧರ್ಮಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳು

ಜಾಮಿಯಾ ಮಸೀದಿ ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ

ಮಂಡ್ಯ, ಡಿ 22: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಮೂಡಲಬಾಗಿಲು ಬಳಿ ಜಾಮಿಯಾ ಮಸೀದಿ (Jamia Masjid) ಜಾಗದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಈ ಮಧ್ಯೆ, ಶ್ರೀರಂಗಪಟ್ಟಣದಲ್ಲಿ ಡಿಸೆಂಬರ್ 24ರಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಎಸ್​​​ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಜಾಮಿಯಾ ಮಸೀದಿ ಜಾಗದಲ್ಲಿ ಮತ್ತೆ ಮಂದಿರ ನಿರ್ಮಾಣದ ಸಂಕಲ್ಪ ತೊಡಲಾಗಿದೆ. ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಸಂಕಲ್ಪದೊಂದಿಗೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿಯಾಗಲಿದ್ದಾರೆ.

ಹನುಮ ಸಂಕೀರ್ತನಾ ಯಾತ್ರೆಗೆ ವಿರೋಧ ವ್ಯಕ್ತಪಡಿಸಿರುವ ಎಸ್‌ಡಿಪಿಐ, ಇದು ಶಾಂತಿ ಸೌಹಾರ್ದತೆ ಕದಡುವ ಯತ್ನವೆಂದು ಆರೋಪಿಸಿದೆ. ಹೀಗಾಗಿ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ. ಯಾತ್ರೆಗೆ ಅನುಮತಿ ನೀಡಿದರೆ ಕೋಮು ಗಲಭೆ ನಡೆಯುವ ಸಾಧ್ಯತೆ ಇದೆ ಎಂದು ಎಸ್‌ಡಿಪಿಐ ಆತಂಕ ವ್ಯಕ್ತಪಡಿಸಿದೆ.

ಕಳೆದ ವರ್ಷ ಯಾತ್ರೆ ವೇಳೆ ಮುಸ್ಲಿಮರ ಮನೆಗಳ ಮೇಲೆ ದಾಳಿ ನಡೆದಿತ್ತು. ಮುಸ್ಲಿಮರ ಮನೆ, ಅಂಗಡಿಗಳ ಮೇಲೆ ದಾಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಜಾಮಿಯಾ ಮಸೀದಿ ಧ್ವಂಸಕ್ಕೆ ಹುನ್ನಾರ ನಡೆಯುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಯಾತ್ರೆಗೆ ಅವಕಾಶ ನೀಡಬಾರದು ಎಂದು ಎಸ್​ಡಿಪಿಐ ಒತ್ತಾಯಿಸಿದೆ.

ಒಂದು ವೇಳೆ ಯಾತ್ರೆಗೆ ಅನುಮತಿ ನೀಡಿ, ಅದರಿಂದಾಗು ಅನಾಹುತವಾದರೆ ಸರ್ಕಾರವೇ ಹೊಣೆ ಎಂದು ಎಸ್​ಡಿಪಿಐ ಎಚ್ಚರಿಕೆ ನೀಡಿದೆ.

Related posts

ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ-ಸಚಿವ ಶರಣಪ್ರಕಾಶ್ ಪಾಟೀಲ್

ನ.29 ರಿಂದ ಬೆಂಗಳೂರು ಟೆಕ್ ಸಮ್ಮಿಟ್- ಸಚಿವ ಪ್ರಿಯಾಂಕ್ ಖರ್ಗೆ.

 ನಾಳೆ ಚಂದ್ರಗ್ರಹಣ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ.