ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆಭರಣಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ…

ಬೆಂಗಳೂರು: ಆಭರಣಪ್ರಿಯರಿಗೆ  ಸಿಹಿಸುದ್ದಿ ಸಿಕ್ಕಿದ್ದು, ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ.

ಭಾರತದಲ್ಲಿ ಎಲ್ಲಾ ಕಡೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ದೇಶದಲ್ಲಿ ಕಡಿಮೆ ಆಗಿದೆ. ಕಳೆದ ಮೂರು ವಾರಗಳಿಂದ ಸತತವಾಗಿ ಏರಿಕೆ ಆಗಿದ್ದ ಈ ಎರಡೂ ಲೋಹಗಳ ಬೆಲೆ ಈ ವಾರ ಇಳಿಕೆಯ ಹಾದಿಯಲ್ಲಿದೆ.

ಭಾರತದಲ್ಲಿ ಸದ್ಯ 10  ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 56,400ರೂ ಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,530ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 56,400 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಂಗೆ 7,400 ರೂಪಾಯಿಯಲ್ಲಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂ) ನೋಡುವುದಾದರೇ ಚೆನ್ನೈ: 56,860 ರೂ., ಮುಂಬೈ: 56,400 ರೂ., ದೆಹಲಿ: 56,550 ರೂ., ಕೋಲ್ಕತಾ: 56,400 ರೂ., ಕೇರಳ: 56,400 ರೂ., ಅಹ್ಮದಾಬಾದ್: 56,450 ರೂ., ಜೈಪುರ್: 56,550 ರೂ., ಲಕ್ನೋ: 56,550 ರೂ., ಭುವನೇಶ್ವರ್: 56,400 ರೂಪಾಯಿ ಇದೆ.

 

Related posts

ಕನ್ನಡ ಸಾಹಿತ್ಯ ಪರಿಷತ್ತಿನ  ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ʻರತ್ನʼ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ರೋಟರಿ ಸೆಂಟ್ರಲ್‌ನಿಂದ ಉಚಿತ ಲ್ಯಾಪ್‌ಟಾಪ್ ವಿತರಣೆ-ಶಿವರಾಜ್ 

ಮಲವಗೊಪ್ಪದಲ್ಲಿ ಆರೋಗ್ಯ ಶಿಬಿರ: ನೂರಕ್ಕೂ ಹೆಚ್ಚು ಜನರಿಗೆ ವೈದ್ಯಕೀಯ ತಪಾಸಣೆ