ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸರ್ಕಾರಿ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿಗೆ ಮುಂದಾದ ಸರ್ಕಾರ.

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮಗಳು ನಡೆಯುತ್ತಲೇ ಇದ್ದು ಅಕ್ರಮದಲ್ಲಿ ತೊಡಗಿದ್ದವರು ಸಿಕ್ಕಿಬಿದ್ದಿದ್ದಾರೆ. ಪಿಎಸ್ ಐ ನೇಮಕಾತಿ ಹಗರಣ, ಇತ್ತೀಚೆಗೆ ಕೆಇಎ ನಡೆಸಿದ ಎಫ್ ಡಿಎ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದಲ್ಲಿ ತೊಡಗಿದ್ದ ಪ್ರಕರಣಗಳು ಕಂಡು ಬಂದಿದೆ. ಹೀಗೆ ಪದೇ ಪದೇ  ನೇಮಕಾತಿ ಪರೀಕ್ಷೆಯಲ್ಲಿ ನಡೆಯುತ್ತಿರುವ ಅಕ್ರಮಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ.

ಹೌದು, ರಾಜ್ಯದ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮ ತಡೆಯುವ ಉದ್ದೇಶದಿಂದ ಸರ್ಕಾರ ಪ್ರತ್ಯೇಕ ಕಾಯ್ದೆ ಜಾರಿಗೆ ತರಲು ನಿರ್ಧರಿಸಿದೆ.

ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ ವಿಧೇಯಕ 2023(ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯದ ವಿಧಾನ ತಡೆಗಟ್ಟುವಿಕೆ ಕ್ರಮಗಳು) ಮುಂದಿನ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ, ಇಂಜಿನಿಯರ್ ನೇಮಕಾತಿ ಪರೀಕ್ಷೆ, ನಿಗಮ -ಮಂಡಳಿಗಳ ಎಫ್.ಡಿ.ಎ. ನೇಮಕಾತಿ ಸೇರಿದಂತೆ ಅನೇಕ ನೇಮಕಾತಿ ಪರೀಕ್ಷಾ ಅಕ್ರಮಗಳು ನಡೆದಿದೆ. ಇದರಿಂದ ಅರ್ಹರು ಅವಕಾಶ ವಂಚಿತರಾಗುತ್ತಿದ್ದಾರೆ. ಅಕ್ರಮದಲ್ಲಿ ಭಾಗಿಯಾದವರು ಶಿಕ್ಷೆಯಿಂದ ಪಾರಾಗುವುದನ್ನು ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೆ ತೀರ್ಮಾನಿಸಲಾಗಿದೆ.

 

Related posts

22 ಬೆಟ್ಟಿಂಗ್ ಆ್ಯಪ್, ವೆಬ್ ಸೈಟ್ ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ.

ಕೆಳ ಹಾಗೂ ಶೋಷಿತ ಸಮುದಾಯಗಳಿಗಾಗಿ ಕಾಂತರಾಜ್ ವರದಿ ಜಾರಿಗೆ ಬರಬೇಕಾಗಿದೆ-ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.