ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳ’ಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ.

ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾದ  ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಔರಾದ್ಕರ್ ವರದಿ ಜಾರಿಗೊಳಿಸಿ, ಅದರ ಅನ್ವಯ ವೇತನ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಇದೆ. ಈ ನಡುವೆ ಪೊಲೀಸ್ ಸಿಬ್ಬಂದಿಗಳ ಒತ್ತಾಯಕ್ಕೆ ಮಣಿದಿರುವ ಸಿಎಂ ಸಿದ್ಧರಾಮಯ್ಯ, ಪೊಲೀಸರ ವೇತನ ಹೆಚ್ಚಳಕ್ಕಿ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಮೂಲಕ ರಾಜ್ಯ ಸರ್ಕಾರ ಪೊಲೀಸ್ ಸಿಬ್ಬಂದಿ ವೇತನಕ್ಕೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು,  ವೇತನ ತಾರತಮ್ಯ ನಿವಾರಣೆ ಮಾಡೋದಕ್ಕಾಗಿ ಔರಾದ್ಕರ್ ವರದಿಯ ಅನ್ವಯ ಪೊಲೀಸರ ವೇತನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಈವರೆಗೆ ವರದಿ ಜಾರಿಯಿಂದ ಸರ್ಕಾರಕ್ಕೆ 500 ಕೋಟಿ ರೂ.ಹೆಚ್ಚು ವೆಚ್ಚವಾಗಲಿದೆ. ಪೊಲೀಸರಿಗಾಗಿ 13 ಸಾವಿರ ವರತಿ ನಿರ್ಮಿಸಲಾಗಿದ್ದು, ಶೇ.40ರಷ್ಟು ಸಿಬ್ಬಂದಿಗೆ ಮನೆ ನೀಡಲಾಗಿದೆ. ಐದು ವರ್ಷದಲ್ಲಿ ಶೇ.70 ಸಿಬ್ಬಂದಿಗೆ ವಸತಿ ದೊರೆಯಲಿದೆ. ಯಾವ ರಾಜ್ಯದಲ್ಲೂ ಪೊಲೀಸರ ವಸತಿಗೆ ಇಷ್ಟೊಂದು ಆದ್ಯತೆ ನೀಡಿಲ್ಲ. ತುಮಕೂರು ನಗರದಲ್ಲಿಯೂ 16 ಕೋಟಿ ರೂ ವೆಚ್ಚದಲ್ಲಿ 73 ವಸತಿ ನಿರ್ಮಿಸಲಾಗಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕೂಡಿಗೇನಹಳ್ಳಿಯಲ್ಲಿ ಪೊಲೀಸ್ ಠಾಣೆಗೆ ಹೊಸ ಕಟ್ಟಡ ನಿರ್ಮಿಸಲಾಗುವುದು. 1 ಲಕ್ಷ ಜನರಿಗೆ 162 ಪೊಲೀಸರು ಬೇಕು. ಆದ್ರೇ 4 ವರ್ಷದಿದಂ ಇಲಾಖೆಯಲ್ಲಿ ಹುದ್ದೆಗಳ ಭರ್ತಿಯಾಗಿಲ್ಲ. ಮುಂದಿನ 2 ವರ್ಷದಲ್ಲಿ ಖಾಲಿಯಿರುವ ಎಲ್ಲಾ ಹುದ್ದೆ ಭರ್ತಿ ಮಾಡಲಾಗುವುದು ಎಂದು ಹೇಳಿದರು.

 

Related posts

ನಾಲ್ವಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಾಡಿನ ಪ್ರಾತಃಸ್ಮರಣೀಯರು – ನಾಡೋಜ ಡಾ. ಮಹೇಶ ಜೋಶಿ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ಮುಂದೆ ಪ್ರಧಾನ ಮಂತ್ರಿ ಮ್ಯೂಸಿಯಂ…

ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ