ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ.  

ಬೆಂಗಳೂರು :  ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.

ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಇಡೀ ವಿತರಕ ಸಮುದಾಯವನ್ನು, ಈ ಸಮುದಾಯದ ಕಾರ್ಯಕ್ಷಮತೆ ಮತ್ತು ಶ್ರಮವನ್ನು ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಗುರುತಿಸಿದೆ, ಗೌರವಿಸಿದೆ.

ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ್ದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು, “ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು” ಎನ್ನುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Related posts

ಪ್ರತಿಭೆಯನ್ನು ಉದಾತ್ತವಾಗಿ ನೋಡಿ ಬೆನ್ನುತಟ್ಟಿ ಪ್ರೋತ್ಸಾಹಿಸಬೇಕು-ಪತ್ರಕರ್ತ, ಕವಿ ಎನ್. ರವಿಕುಮಾರ್

ಫ್ರೈಡ್‍ ಯುರೋ: ಕ್ರೀಡಾವಿಜೇತರಿಗೆ ಅಭಿನಂದನೆ.

ಕುವೆಂಪು ವಿವಿ: ಸ್ನಾತಕೋತ್ತರ ಪದವಿ ಸೀಟುಗಳು ಲಭ್ಯ: ಎಂ.ಎ. ಪತ್ರಿಕೋದ್ಯಮ ಸೀಟುಗಳಿಗೆ ವಾಕ್‌ ಇನ್ ಪ್ರವೇಶಾತಿ