ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಎನ್ ಇಪಿಗೆ ಕೋಕ್: ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು-  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊನೇ ಮೊಳೆ ಹೊಡೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಈ ನಿರ್ಧಾರಕ್ಕೆ ಶಿಕ್ಷಣ ತಜ್ಞರು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ, “ರಾಜ್ಯ ಶಿಕ್ಷಣ ನೀತಿ”ಗೆ ಮಹತ್ವದ ಸಲಹೆಗಳನ್ನೂ ನೀಡಿದ್ದಾರೆ.

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್ ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

15 ಮಂದಿ ತಜ್ಞರ ಆಯೋಗವನ್ನು ರಚನೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ.

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ಧುರಾಮಯ್ಯ ತಿಳಿಸಿದ್ದಾರೆ.

 

Related posts

ನಿವೇಶನಗಳ ಹಂಚಿಕೆಯಲ್ಲಿ ತಾರತಮ್ಯ: ಗ್ರಾಮಸ್ಥರಿಂದ ಪ್ರತಿಭಟನೆ.

ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ.

ಯೋಗ-ಚೆಸ್‌ನಿಂದ ಆರೋಗ್ಯ-ಏಕಾಗ್ರತೆ ವೃದ್ಧಿ- ರಾ. ಹ. ತಿಮ್ಮೇನಹಳ್ಳಿ ಅಭಿಪ್ರಾಯ