ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷ: ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಲಿ-ಶಾಮನೂರು ಶಿವಶಂಕರಪ್ಪ ಆಗ್ರಹ.

ಬೆಂಗಳೂರು: ಜಾತಿ ಗಣತಿ ವರದಿಗೆ ವೀರಶೈವ ಮಹಾಸಭಾದ ಅಧ್ಯಕ್ಷ  ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿದ್ದು, ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಮನೂರು ಶಿವಶಂಕರಪ್ಪ,   ಜಾತಿಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು. ಜಾತಿ ಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗೆ ಭೇಟಿ ನೀಡದೆ ಸಿದ್ದಪಡಿಸಲಾಗಿದೆ.  ನಮ್ಮ ಸಮುದಾಯದ ಮನೆಗಳಿಗೆ ಹೋಗಿ ಯಾವುದೇ ಸರ್ವೆ ಮಾಡಿಲ್ಲ. ವೀರಶೈವ ಲಿಂಗಾಯತರ ಸಂಖ್ಯೆಯನ್ನ ಕಡಿಮೆ ತೋರಿಸಲಾಗಿದೆ. ಇದರಿಂದ ಸಮುದಾಯಕ್ಕೆ ತುಂಬಾ ನಷ್ಟವಾಗಲಿದೆ  ಎಂದರು.

ನಾವು ಜಾತಿ ಗಣತಿ ವಿರೋಧಿ ಅಲ್ಲ ಆದ್ರೆ. ಜಾತಿಗಣತಿ ವೈಜ್ಞಾನಿಕವಾಗಿರಲಿ ಈ ಜಾತಿ ಗಣತಿ ಈಗಾಗಲೇ 8 ವರ್ಷದ ಹಳೆಯದಾಗಿದೆ.   ವರದಿಯಲ್ಲಿ ಹಲವು ನ್ಯೂನ್ಯತೆಗಳಿವೆ.  ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಜಾತಿಗಣತಿ ಮಾಡಬೇಕು ಎಂದರು.

Related posts

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಲಿ-ನಾಗರಿಕ ಹಿತರಕ್ಷಣಾ ಸಮಿತಿ ಆಗ್ರಹ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ಮುಂದೆ ಪ್ರಧಾನ ಮಂತ್ರಿ ಮ್ಯೂಸಿಯಂ…

ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನದ ವತಿಯಿಂದ ಸ್ವಾತಂತ್ರ್ಯ ದಿನಾಚಾರಣೆ.