ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಕ್ತಿ ಯೋಜನೆ ಸ್ಥಗಿತ ಬಗ್ಗೆ ಹಬ್ಬಿದ್ದ ಊಹಾಪೋಹಕ್ಕೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ.

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತ  ಕುರಿತು ಊಹಾಪೋಹಗಳು ಕೇಳಿಬರುತ್ತಿದ್ದು, ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳು ಕೇಳಿ ಬರುತ್ತಿವೆ. ಶಕ್ತಿಯೋಜನೆ ನಿಲ್ಲಿಸಲಾಗುತ್ತೆ ಎಂಬ ಊಹಾಪೋಹ ಹಬ್ಬಿಸಲಾಗುತ್ತದೆ. ಒಂದು ಪಕ್ಷದವರು ಮಾಡಿಸುತ್ತಿದ್ದಾರೆ.  ಇನ್ನೂ 10 ವರ್ಷಗಳಕಾಲ ಶಕ್ತಿ ಯೋಜನೆ ಮುಂದುವರೆಯುತ್ತೆ ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ ರಾಜ್ಯದಲ್ಲಿ ಮುಂದಿನ ಬಾರಿಯೂ ನಾವೇ ಅಧೀಕಾರಕ್ಕೆ ಬರುತ್ತೇವೆ. ಹೀಗಾಗಿ ಶಕ್ತಿ ಯೋಜನೆ ಮುಂದುವರೆಯುತ್ತದೆ ಎಂದರು.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಎಸ್ ಆರ್ ಟಿಸಿ, ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ.  ಯಾವುದೇ ಗೊಂದಲದ ಸಂದೇಶಗಳನ್ನ ಜನರು ನಂಬಬಾರದು ಎಂದು ತಿಳಿಸಿದೆ.

Related posts

ಕೋಟ್ಯಾಂತರ ರೂ.ಮೌಲ್ಯದ ಡ್ರಗ್ಸ್ ಜಪ್ತಿ: ಮೂವರು ವಿದೇಶೀಯರು ಸೇರಿ 14 ಮಂದಿ ಅರೆಸ್ಟ್

ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ; ಕಾಂಗ್ರೆಸ್ ಶಾಸಕ  ಸ್ಪೋಟಕ ಹೇಳಿಕೆ

ಬಂಗಾರಪ್ಪನವರ ಮೇಲಿನ ಪ್ರೀತಿಯಿಂದ ಎಲ್ಲೆಡೆ ನನಗೂ ಗೌರವ ಅಭಿನಂದನೆ ಸಿಗುತ್ತಿದೆ-ಸಚಿವ ಮಧು ಬಂಗಾರಪ್ಪ.