ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಯುಪಿ ಸಿಎಂ ಯೋಗಿ ಆದಿತ್ಯನಾಥ್  ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಚರ್ಚೆ

 

ಬೆಂಗಳೂರು: ಇತ್ತೀಚೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚಿಸಿದ್ದರು. ಇದೀಗ ಹೆಚ್.ಡಿಕೆ ಪುತ್ರ  ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರನ್ನು  ಭೇಟಿಯಾಗಿ ಚರ್ಚಿಸಿದ್ದಾರೆ

ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಯೋಗಿ ಆದಿತ್ಯನಾಥ್ ಅವರು ಪಾಠ ಮಾಡಿದ್ದಾರೆ. ಭೇಟಿ ವೇಳೆ ನಿಖಿಲ್, ಯೋಗಿಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಗಿಫ್ಟ್ ಮಾಡಿದ್ದಾರೆ.

ಈ ಕುರಿತು ನಿಖಿಲ್ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು.
ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಎಂದು ನಿಖಿಲ್ ಫೋಸ್ ಹಂಚಿಕೊಂಡಿದ್ದಾರೆ.

Related posts

ಮೈಸೂರಲ್ಲಿ 28ಕ್ಕೆ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಮತ್ತು ಸಿರಿಧಾನ್ಯ ನಡಿಗೆ

TOD News

ವಯೋವೃದ್ಧರೊಬ್ಬರ ನ್ಯಾಯಾಂಗ ಹೋರಾಟ: ಸರ್ಕಾರಿ ನೌಕರರ ವಿರುದ್ಧ ಕಿಡಿ ಕಾರಿದ ಹೈಕೋರ್ಟ್

ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವ ಶಕ್ತಿ ಈ ದೇಶದ ಮಹಿಳೆಯರಲ್ಲಿದೆ-ಲೇಖಕಿ ಸಿನು ಜೋಸ್