ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುತ್ತೇವೆ- ಸಿಎಂ ಸಿದ‍್ಧರಾಮಯ್ಯ.

ಮೈಸೂರು: ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತೇವೆ. ಇದರಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಪಿಎಸ್ ಐ ಹಗರಣ, 40% ಹಗರಣ, ಕೋವಿಡ್ ಹಗರಣ ಎಲ್ಲದನ್ನೂ ತನಿಖೆಗೆ ಒಳಪಡಿಸಿದ್ದೇವೆ. ಹಗರಣದ ಬಗ್ಗೆ ತನಿಖೆ ಮಾಡಿಸದೆ ಇವರು ತಿಂದುಕೊಂಡು ಹಾಗೇ ಹೋಗಲಿ ಎಂದು ಬಿಡಬೇಕಾ. ಅವರ ಕಾಲದಲ್ಲೇ ಹಗರಣ ತನಿಖೆಗೆ ಆಗ್ರಹಿಸಿದ್ದವು. ಆದರೆ ಅವರು ತನಿಖೆ ಮಾಡಿಸಲಿಲ್ಲ. ಅದ್ದರಿಂದ ಈಗ ನಾವು ತನಿಖೆ ಮಾಡಿಸುತ್ತಿದ್ದೇವೆ ಎಂದು ತಿಳಿಸಿದರು.

ಗ್ಯಾರಂಟಿಗಳ ಜಾರಿ ಕಠಿಣ ಅನಿಸಲಿಲ್ಲ.

ಸರ್ಕಾರ 100 ದಿನ ಪೂರೈಸಿದ ವಿಚಾರ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ‌. ಖುದ್ದು ಪ್ರಧಾನಿ ನರೇಂದ್ರ ಮೋದಿ ಕೂಡ ಗ್ಯಾರಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.

Related posts

ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿದ್ದ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆಗೆ ವೈಭವದ ಚಾಲನೆ.

ಯೋಧರು , ರಾಜಮಹಾರಾಜರು ಮತ್ತು ದೇಶದ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ-ಸಂಸದ ಬಿ.ವೈ. ರಾಘವೇಂದ್ರ

ಹಿಂದೂ ಧರ್ಮದಿಂದಾಗಿಯೇ ಭಾರತದಲ್ಲಿ ಎಂದಿಗೂ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿಲ್ಲ- ಮೋಹನ್ ಭಾಗವತ್.