ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಣಿಪುರ ಹೊತ್ತಿ ಉರಿಯುತ್ತಿದ್ದ ವೇಳೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದರು- ರಾಹುಲ್ ಗಾಂಧಿ ಟೀಕಾಪ್ರಹಾರ.

ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದರು. ಇದು ಪ್ರಧಾನಿ ಹುದ್ದೆಗೆ ಭೂಷಣವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಾ ಪ್ರಹಾರ ನಡೆಸಿದರು.

ಸುದ್ಧಿಗೋಷ್ಠಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ರಾಹುಲ್ ಗಾಂಧಿ, ಮಣಿಪುರ ವಿಷಯದಲ್ಲಿ ಪ್ರಧಾನಿ ಮೋದಿ ಪ್ರತಿಕ್ರಿಯೆಗಾಗಿ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆದರೆ ಪ್ರಧಾನಿಯ ಸುಮಾರು ಎರಡು ಗಂಟೆಗಳ ಭಾಷಣವು ಮಣಿಪುರದ ಕುರಿತು ಕೇವಲ ಎರಡು ನಿಮಿಷಗಳಿಗೆ ಮಾತ್ರ ಮೀಸಲಾಗಿತ್ತು ಎಂದು ರಾಹುಲ್ ಆರೋಪಿಸಿದರು.

ನಾನು ನಿನ್ನೆ ಪ್ರಧಾನಿ ಎರಡು ಗಂಟೆಗಳ ಕಾಲ ನಗುತ್ತಾ, ತಮಾಷೆ ಮಾಡುತ್ತಾ, ಘೋಷಣೆಗಳನ್ನು ಕೂಗಿ ಮಾತನಾಡುವುದನ್ನು ನೋಡಿದೆ. ಮಣಿಪುರ ಕಳೆದ ಹಲವು ತಿಂಗಳಿನಿಂದ ಹೊತ್ತಿ ಉರಿಯುತ್ತಿದೆ ಎಂಬುದನ್ನು ಪ್ರಧಾನಿ ಮರೆತಂತಿದೆ ಎಂದು ರಾಹುಲ್ ಹೇಳಿದರು.

ಸಂಸತ್ತಿನಲ್ಲಿ ಮಧ್ಯದಲ್ಲಿ ಕುಳಿತಿದ್ದ ಪ್ರಧಾನಿ ಲಜ್ಜೆಯಿಲ್ಲದೆ ನಗುತ್ತಿದ್ದರು. ಸಮಸ್ಯೆ ನಾನು ಅಥವಾ ಕಾಂಗ್ರೆಸ್ ಅಲ್ಲ. ಸಮಸ್ಯೆ ಮಣಿಪುರದಲ್ಲಿ ಏನಾಗುತ್ತಿದೆ ಮತ್ತು ಹಿಂಸಾಚಾರವನ್ನು ಏಕೆ ತಡೆಯುತ್ತಿಲ್ಲ ಎಂದು ರಾಹುಲ್ ಪ್ರಶ್ನಿಸಿದರು.

 

Related posts

ಹೊಸಮನೆಯಲ್ಲಿ ಐ ಮಾಸ್ಟ್ ದೀಪಗಳ ಉದ್ಘಾಟನೆ.

ಶ್ರೇಷ್ಠ ಪರಂಪರೆ ಹೊಂದಿರುವ ದೇಶ ಭಾರತ-ಅಶೋಕ ಹಂಚಲಿ

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿಸಿರುವ ಜಾಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ.